ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನ ಆಚರಣೆ
ತಾ. 26-11-2019ರಂದು ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯ ಎನ್.ಎಸ್.ಎಸ್. ಘಟಕದ ವತಿಯಿಂದ ಭಾರತದ ಸಂವಿಧಾನವನ್ನು ಅಂಗೀಕರಿಸಿದ 70ನೇ ವರ್ಷಾಚರಣೆ ಹಾಗೂ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು. ಎಸ್.ಡಿ.ಎಂ. ಕಾನೂನು ಮಹಾವಿದ್ಯಾಲಯ ಮಂಗಳೂರು ಇದರ ಕಾನೂನು ವಿಭಾಗದ ಮುಖ್ಯಸ್ಥ ಶ್ರೀ ಮಹೇಶ್‍ಚಂದ್ರ ನಾಯಕ್ ಮುಖ್ಯ ಅತಿಥಿ ಹಾಗೂ ಪ್ರಧಾನ ಭಾಷಣಕಾರರಾಗಿ ಆಗಮಿಸಿದ್ದರು. ಅವರು ತಮ್ಮ ಮಾತಿನಲ್ಲಿ ಸಂವಿಧಾನದ ಮಹತ್ವಗಳನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ| ಶ್ರೀನಿವಾಸ ಮಯ್ಯ ಡಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ| ಅನಂತ ಕುಲಕರ್ಣಿ, ಎನ್.ಎಸ್.ಎಸ್. ಘಟಕಾಧಿಕಾರಿ ಪ್ರೊ| ರಾಕೇಶ್ ಮಲ್ಯ ಇವರು ಉಪಸ್ಥಿತರಿದ್ದರು.
December 17, 2019 Posted By SIT